Sunday, 15th December 2024

ಪಶ್ಚಿಮ ಬಂಗಾಳದ ಮಾಜಿ ಸಿಎಂ ಪುತ್ರಿ ಲಿಂಗ ಬದಲಾವಣೆಗೆ ನಿರ್ಧಾರ

ಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪುತ್ರಿ ಸುಚೇತನಾ ಭಟ್ಟಾಚಾರ್ಯ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ.

ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು ಗುರುತಿಸಿಕೊಂಡಿದ್ದೇನೆ ಮತ್ತು ದೈಹಿಕವಾಗಿಯೂ ಪುರುಷನಾಗಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

“ನನಗೆ ನನ್ನ ಪೋಷಕರ ಗುರುತು ಅಥವಾ ಕುಟುಂಬದ ಗುರುತು ದೊಡ್ಡ ವಿಷಯವಲ್ಲ. ನನ್ನ ಎಲ್​ಜಿಬಿಟಿಕ್ಯೂ ಚಳುವಳಿಯ ಭಾಗವಾಗಿ ನಾನು ಇದನ್ನು ಮಾಡುತ್ತಿದ್ದೇನೆ. ಟ್ರಾನ್ಸ್ ಮ್ಯಾನ್ ಆಗಿ ನಾನು ಪ್ರತಿದಿನ ಎದುರಿಸುತ್ತಿರುವ ಸಾಮಾಜಿಕ ಕಿರುಕುಳವನ್ನು ನಿಲ್ಲಿಸಲು ನಾನು ಬಯಸಿದ್ದೇನೆ. ನಾನು ವಯಸ್ಕನಾಗಿದ್ದೇನೆ. ನನಗೆ ಈಗ 41 ವರ್ಷ ಆಗಿದೆ ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಬಹುದು. ಅದೇ ರೀತಿ ಈ ನಿರ್ಧಾರ ತೆಗೆದುಕೊಳ್ಳು ತ್ತಿದ್ದೇನೆ. ದಯವಿಟ್ಟು ನನ್ನ ಪೋಷಕರನ್ನು ಇದಕ್ಕೆ ಎಳೆಯಬೇಡಿ. ಮಾನಸಿಕವಾಗಿ ತನ್ನನ್ನು ತಾನು ಪುರುಷನೆಂದು ಪರಿಗಣಿಸುವವನು ಸಹ ಮನುಷ್ಯನೇ, ನಾನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸಿದ್ದೇನೆ. ಅದು ಈಗ ದೈಹಿಕವಾಗಿರ ಬೇಕೆಂದು ನಾನು ಬಯಸಿದ್ದೇನೆ” ಎಂದಿದ್ದಾರೆ.

“ನನ್ನ ಈ ನಿರ್ಧಾರದ ವಿರುದ್ಧ ಏನೇ ಬಂದರೂ ನಾನು ಹೋರಾಡುತ್ತೇನೆ. ಯಾರು ಏನೇ ಹೇಳಿದರೂ ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ದ. ದಯವಿಟ್ಟು ಮಾಧ್ಯಮಗಳು ಈ ಸುದ್ದಿಯನ್ನು ತಿರುಚಿಕೊಂಡು ಹಾಕಬೇಡಿ”ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ನನ್ನನು ಬಾಲ್ಯದಿಂದಲೂ ಅರ್ಥ ಮಾಡಿಕೊಂಡ ನನ್ನ ಪೋಷಕರು ನನ್ನ ನಿರ್ಧಾರವನ್ನು ಬೆಂಬಲಿಸಬಹುದು ಎಂದು ಅವರು ಹೇಳಿದ್ದಾರೆ.