Friday, 22nd November 2024

ಜ.26ರಂದು ಟ್ರ್ಯಾಕ್ಟರ್‌ ರ್‍ಯಾಲಿ: ದೆಹಲಿ ಪೊಲೀಸರೇ ಪರಿಸ್ಥಿತಿ ನಿಭಾಯಿಸಲಿ ಎಂದ ಸುಪ್ರೀಂ

ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್‌ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ ಪೊಲೀಸರಿಗಿದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.

ಗಣರಾಜ್ಯೋತ್ಸವ ಸಂಭ್ರಮಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಆಯೋಜಿಸಿ ರುವ ಟ್ರ್ಯಾಕ್ಟರ್‌ ರ್‍ಯಾಲಿ ಅಥವಾ ಯಾವುದೇ ರೀತಿಯ ಪ್ರತಿಭಟನೆಗೆ ತಾತ್ಕಾಲಿಕ ಪ್ರತಿಬಂಧಕಾಜ್ಞೆ ನೀಡಬೇಕು ಎಂದು ಕೋರಿ ದೆಹಲಿ ಪೊಲೀಸರ ಮೂಲಕ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ಗಣರಾಜ್ಯೋತ್ಸವ ದಿನ ನಡೆಯುವ ಪ್ರತಿಭಟನೆ ಮತ್ತು ರ‍್ಯಾಲಿಯಿಂದ ದೇಶಕ್ಕೆ ಮುಜುಗರವಾಗುತ್ತದೆ ಎಂದು ಅರ್ಜಿ ಯಲ್ಲಿ ಉಲ್ಲೇಖಿಸಲಾಗಿತ್ತು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠವು ಈ ಆದೇಶ ನೀಡಿದೆ.  ರಾಜಧಾನಿಯನ್ನು ಯಾರು ಪ್ರವೇಶಿಸಬೇಕು ಎನ್ನುವ ಬಗ್ಗೆ ದೆಹಲಿ ಪೊಲೀಸರೇ ನಿರ್ಧಾರ ಕೈಗೊಳ್ಳಬೇಕು’ ಎಂದು ಪೀಠ ತಿಳಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡುತ್ತೇವೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ನಿಮ(ಅಟಾರ್ನಿ ಜನರಲ್‌) ಗಿದೆ’ ಎಂದು ಪೀಠ ತಿಳಿಸಿದೆ.