Saturday, 23rd November 2024

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆರೋಗ್ಯದಲ್ಲಿ ಏರುಪೇರು: ವಿಚಾರಣೆ ಮುಂದೂಡಿಕೆ

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ ಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಶುಕ್ರವಾರ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಕೋರ್ಟ್​ನಿಂದ ಅಧಿಕೃತ ಪತ್ರ ಹೊರಡಿಸಲಾಗಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು, ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳ ಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು ವಿಚಾರಣೆ ನಡೆಸ ಬೇಕಿತ್ತು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿ, ಇತಹೆ ಹತ್ಯ ಪ್ರಕರಣಗಳ ವಿಚಾರಣೆ ನಡೆಸ ಬೇಕಿತ್ತು. ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಅವರ ಮನವಿಯನ್ನು ವಿಚಾರಣೆ ನಡೆಸಬೇಕಿತ್ತು.