Thursday, 19th September 2024

ಇಂದು ಸಂಜೆ ದ್ವಾರಕಾದಲ್ಲಿ ಸುರೇಶ್ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ನವದೆಹಲಿಯ ದ್ವಾರಕಾದಲ್ಲಿರುವ‌ ರುದ್ರಭೂಮಿಯಲ್ಲಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನಾಲ್ಕು ಗಂಟೆ ವೇಳೆಗೆ‌ ನಡೆಯಲಿದೆ.

ಅಂಗಡಿ ಅವರ ಒಬ್ಬ ಪುತ್ರಿ ಬೆಳಗಾವಿಯಿಂದ ನವದೆಹಲಿಗೆ ಬರಲಿದ್ದು, ಅವರು ಬಂದ ನಂತರ ‌ಅಂತ್ಯಕ್ರಿಯೆ‌ ನೆರವೇರಿಸಲಾಗು ವುದು.  ಬೆಳಗಾವಿಯ ಕೆ.ಕೆ.‌ಕೊಪ್ಪ‌ಗ್ರಾಮಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಸಾಕಷ್ಟು ಪ್ರಯತ್ನ ಮಾಡಲಾಯಿತು. ಆದರೆ, ಕೇಂದ್ರ ಸರ್ಕಾರದ ಕೋವಿಡ್ ಮಾರ್ಗದರ್ಶಿ ಅನ್ವಯ ಪಾರ್ಥಿವ ಶರೀರವನ್ನು ಸಾಗಿಸುವುದು‌ ಅಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಪಾರ್ಥಿವ ಶರೀರ ಬೆಳಗಾವಿಗೆ ತರಲು ಕೋವಿಡ್ ಅಡ್ಡಿ

ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಬೇಕು. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬದವರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು.

ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ. ದೆಹಲಿಯ ದ್ವಾರಕಾ ಸೆಕ್ಟರ್ 24ರಲ್ಲಿ ಅಂತ್ಯಕ್ರಿಯೆ ನೆರವೇರಿ ಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.