Monday, 25th November 2024

ರಾಜ್ಯಸಭೆಗೆ ಸುಶೀಲ್ ಕುಮಾರ್ ಮೋದಿ ಅವಿರೋಧ ಆಯ್ಕೆ

ನವದೆಹಲಿ: ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ, ತೆರವಾಗಿ ರುವ ಸ್ಥಾನಕ್ಕೆ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡ ಲಾಗಿದೆ.

ಸೋಮವಾರ ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆ ದಿನವಾಗಿತ್ತು. ಸ್ವತಂತ್ರ ಅಭ್ಯರ್ಥಿಯಾಗಿದ್ದ ಶ್ಯಾಮ್ ನಂದನ್ ಪ್ರಸಾದ್ ನಾಮಪತ್ರ ಸಲ್ಲಿಸಿದ್ದರು. ಆದರೆ 243 ಮಂದಿ ವಿಧಾನಸಭೆಯ ಸದಸ್ಯರ ಪೈಕಿ ಶ್ಯಾಮ್​ ನಂದನ್​ ಪ್ರಸಾದ್​ ಅವರಿಗೆ 10ಕ್ಕಿಂತಲೂ ಕಡಿಮೆ ಬೆಂಬಲ ಸಿಕ್ಕಿದ್ದ ಹಿನ್ನೆಲೆಯಲ್ಲಿ ಅದನ್ನು ತಿರಸ್ಕರಿಸಲಾಗಿತ್ತು.

ಸುಶೀಲ್​ ಕುಮಾರ್​ ಅವರ ನಾಮಪತ್ರವೊಂದೇ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸುಶೀಲ್ ಮೋದಿಯವರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅವರ ಪ್ರಮಾಣಪತ್ರ ಹಸ್ತಾಂತರಿಸಲಾಯಿತು.