Thursday, 12th December 2024

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ

ನವದೆಹಲಿ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸುಶ್ಮಿತಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಸುಶ್ಮಿತಾ ದೇವ್ ಅವರು, ದಯವಿಟ್ಟು ಈ ಪತ್ರವನ್ನು ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪರಿಗಣಿಸಿ. ರಾಷ್ಟ್ರೀಯ ಕಾಂಗ್ರೆಸ್ ನೊಂದಿಗೆ ನನ್ನ ಮೂರು ದಶಕಗಳ ಸುದೀರ್ಘ ಒಡನಾಟವನ್ನು ನಾನು ಪ್ರೀತಿಸುತ್ತೇನೆ. ನನ್ನ ಸ್ಮರಣೀಯ ಪ್ರಯಾಣವಾಗಿರುವ ಪಕ್ಷ, ಅದರ ಎಲ್ಲಾ ನಾಯಕರು, ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.