Thursday, 12th December 2024

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿಯ ಸುವೇಂದು ಅಧಿಕಾರಿ

ನವದೆಹಲಿ: ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗ್ ದೀಪ್ ಧಾನ್ ಖಾರ್ ಅವರಿಗೆ ಫ್ಯಾಕ್ಸ್ ಮೂಲಕ ಕಳುಹಿಸಿರುವುದಾಗಿ ವರದಿಯಾಗಿದೆ.

ರಾಜ್ಯದ ಜನತೆಗೆ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿರುವುದಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಾನು ಪ್ರಾಮಾಣಿಕವಾಗಿ, ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಿರುವುದಾಗಿ ಅಧಿಕಾರಿ ಮಮತಾ ಬ್ಯಾನರ್ಜಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರು ಸುವೇಂದು ಅಧಿಕಾರಿ ಅವರು ಶೀಘ್ರದಲ್ಲಿಯೇ ಬಿಜೆಪಿ ಪಕ್ಷ ಸೇರ ಲಿದ್ದಾರೆ. ಅವರ ಜತೆ ಟಿಎಂಸಿಯ ಹಿರಿಯ ನಾಯಕರು ಕೂಡಾ ಟಿಎಂಸಿ ತೊರೆಯಲಿದ್ದಾರೆ ಎಂದು ತಿಳಿಸಿದ್ದರು.