Saturday, 14th December 2024

ಝಾನ್ಸಿ ತಾಜ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಪಾರು

ಹರಿಯಾಣ : ನವದೆಹಲಿ-ಝಾನ್ಸಿ ತಾಜ್ ಎಕ್ಸ್ ಪ್ರೆಸ್ ರೈಲಿನ ಎಸಿ ಕೋಚ್ ನಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ವಿಭಾಗದ ನಡುವೆ ಹರಿಯಾಣದ ಅಸಾವೋಟಿ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿದೆ.

ಇಂದು ಬೆಳಗ್ಗೆ ಹರಿಯಾಣದ ಪಲ್ವಾನ್ ಅಸಾವತಿ ನಿಲ್ದಾಣದಿಂದ ರೈಲು ಚಲಿಸುತ್ತಿದ್ದ ವೇಳೆ ರೈಲಿನ ಎಸಿ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ರೈಲು ಸಿಬ್ಬಂದಿ ರೈಲನ್ನು ನಿಜಾಮುದ್ದೀನ್ ಮತ್ತು ಪಲ್ವಾನ್ ವಿಭಾಗದ ನಡುವಿನ ಅಸೋಟಿ ನಿಲ್ದಾಣದಲ್ಲಿ ನಿಲ್ಲಿಸಿದ್ದಾರೆ. ಬಳಿಕ ಬೆಂಕಿಯನ್ನು ನಂದಿಸಲಾಗಿದೆ ಎಂದು ಉತ್ತರ ರೈಲ್ವೆಯ ಸಿಪಿಆರ್ ಒ ದೀಪಕ್ ಕುಮಾರ್ ತಿಳಿಸಿದ್ದಾರೆ.