Thursday, 12th December 2024

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಭಾವಕ್ಕೊಳಗಾಗದೆ ತೀರ್ಪು ನೀಡಿ ಎಂದ ಸುಪ್ರೀಂ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿಯೊಬ್ಬರ ಜಾಮೀನು ಅರ್ಜಿಯ ವಿಚಾರದಲ್ಲಿ ಯಾವುದೇ ಪ್ರಭಾವಕ್ಕೊಳಗಾಗದೆ ತೀರ್ಪು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ.

ಹೈಕೋರ್ಟ್ ಆದೇಶದ ವಿರುದ್ಧ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಅವರು ಸಲ್ಲಿಸಿದ್ದ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ಕೋರಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಕರ್ನಾಟಕ ಸರ್ಕಾರ ಮತ್ತು ಇತರರಿಗೆ ನೋಟಿಸ್ ನೀಡಿದೆ.

ಜಾಮೀನು ಅರ್ಜಿಯನ್ನು ಆಕ್ಷೇಪಾರ್ಹ ಆದೇಶದಿಂದ ಪ್ರಭಾವಿಸದೆ ತೀರ್ಮಾನಿಸಲಾಗಿದೆ ಎಂದು ನಾವು ಗಮನಿಸಿದ್ದೇವೆ. “ಎಂದು ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಅನಿರುದ್ಧ ಬೋಸ್ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಿಚಾರಣೆ ಜುಲೈ 15ಕ್ಕೆ ನಡೆಯಲಿದೆ.

ಗೌರಿ ಲಂಕೇಶ್ ಸೋದರಿ ಕವಿತಾ ಸಲ್ಲಿಸಿದ್ದ ಮೇಲ್ಮನವಿಯ ಪ್ರಕಾರ, ಜಾಮೀನು ಕೋರಲು ಏಪ್ರಿಲ್ 22 ರಂದು ತಮ್ಮ ವಿರುದ್ಧದ ಆರೋಪಗಳನ್ನು ರದ್ದು ಪಡಿಸಿದ ಕರ್ನಾಟಕ ಹೈಕೋರ್ಟ್‌ನ ಆಕ್ಷೇಪಾರ್ಹ ತೀರ್ಪನ್ನು ಉಲ್ಲೇಖಿಸಿದ್ದಾರೆ. ಸೆಪ್ಟೆಂಬರ್ 5, 2017 ರ ರಾತ್ರಿ 8ರ ಸುಮಾರಿಗೆ ರಾಜರಾಜೇಶ್ವರಿ ನಗರ ಮನೆಯ ಮುಂಭಾಗದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು.