Sunday, 15th December 2024

ತಮಿಳುನಾಡು ಚುನಾವಣೆ ಬ್ರೇಕಿಂಗ್: ಅಣ್ಣಾಮಲೈ, ಖುಷ್ಬೂ’ಗೆ ಬಿಜೆಪಿ ಟಿಕೆಟ್‌

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಕಾರೈಕುಡಿ ಕ್ಷೇತ್ರದಲ್ಲಿ ಹೆಚ್. ರಾಜಾ, ಧರ್ಮಪುರಂ ಕ್ಷೇತ್ರದಲ್ಲಿ ಪಕ್ಷದ ನಾಯಕ ಮುರುಗನ್ ಅವರಿಗೆ ಟಿಕೆಟ್ ನೀಡಲಾಗಿದೆ.