ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ಕಡತಕ್ಕೆ ತೆಗೆದುಕೊಳ್ಳಬೇಕು, ರಾಜ್ಯ ಪಾಲರು ಸೇರಿಸಿರುವ ಉಳಿದ ಭಾಷಣ ವನ್ನು ತೆಗೆದುಹಾಕಬೇಕೆಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸ್ಪೀಕರ್ ಗೆ ಹೇಳಿದ ನಂತರ ಗವರ್ನರ್ ಆರ್ ಎನ್ ರವಿ ಸದನ ದಿಂದ ಹೊರ ನಡೆದರು.
ರಾಜ್ಯ ಸರ್ಕಾರ ಸಿದ್ದಪಡಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ಕಡತಕ್ಕೆ ಸೇರಿಸುವಂತೆ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ರಾಜ್ಯಪಾಲರ ಭಾಷಣಕ್ಕೆ ಎಂಕೆ ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗವರ್ನರ್ ಸದನದಿಂದ ನಿರ್ಗಮಿಸಿದರು.
ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಜಾತ್ಯತೀತತೆ, ಪೆರಿಯಾರ್, ಬಿ.ಆರ್.ಅಂಬೇ ಡ್ಕರ್, ಕೆ.ಕಾಮರಾಜ್, ಸಿಎನ್ ಅಣ್ಣಾ ದೊರೈ ಮತ್ತು ಕರುಣಾನಿಧಿ ಅವರಂತಹ ನಾಯಕರ ಹೆಸರನ್ನು ಉಲ್ಲೇಖಿಸಲಾಗಿತ್ತು. ಆದರೆ, ರಾಜ್ಯಪಾಲರು ಅವರ ಹೆಸರನ್ನು ತಮ್ಮ ಭಾಷಣದಲ್ಲಿ ಹೇಳಿರಲಿಲ್ಲ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನಿರ್ಣಯ ಮಂಡಿಸಿದರು.
ಈ ಮಧ್ಯೆ, ತಮಿಳುನಾಡು ಹೆಸರು ಸರಿಯಾಗಿಲ್ಲ ಎಂಬ ರಾಜ್ಯಪಾಲರ ಹೇಳಿಕೆ ಬಗ್ಗೆಯೂ ಕಿಡಿಕಾರಿದ ಡಿಎಂಕೆ ಶಾಸಕರು, ಬಿಜೆಪಿ, ಆರ್ ಎಸ್ ಎಸ್ ಸಿದ್ದಾಂತಗಳನ್ನು ಹೇರಬೇಡಿ. ಇದು ನಾಗಲ್ಯಾಂಡ್ ಇಲ್ಲ, ಹೆಮ್ಮೆಯ ತಮಿಳುನಾಡು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Read E-Paper click here