Friday, 22nd November 2024

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಿಗೆ ’ಇಡಿ’ ದಾಳಿ ಬಿಸಿ

ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರ ವಿಲ್ಲುಪುರಂ ನಿವಾ ಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಅಧಿಕಾರಿಗಳು ಸಚಿವ ಪೊನ್ಮುಡಿ ಹಾಗೂ ಅವರ ಪುತ್ರ ಗೌತಮ್ ಸಿಗಮಣಿ ನಿವಾಸದಲ್ಲೂ ತಪಾಸಣೆ ನಡೆಸುತ್ತಿದ್ದಾರೆ.

ಪೊನ್ಮುಡಿ ಅವರು 2007 ಮತ್ತು 2011ರ ನಡುವೆ ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಕ್ವಾರಿ ಪರವಾನಗಿಯನ್ನು ಉಲ್ಲಂಘಿಸಿದ್ದು, ಸಾರ್ವಜನಿಕ ಬೊಕ್ಕಸಕ್ಕೆ ₹28 ಕೋಟಿಗೂ ಹೆಚ್ಚು ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಪ್ರಕರಣದ ವಿಚಾರಣೆಗೆ ತಡೆ ನೀಡುವಂತೆ ಕೋರಿ ಪೊನ್ಮುಡಿ ಮತ್ತು ಗೌತಮ್ ಅವರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿ ದ್ದರು. ಆದರೆ, ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ವಿಚಾರಣೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.

ಇತ್ತೀಚಿಗೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಸೆಂಥಿಲ್‌ ಬಾಲಾಜಿ ಅವರನ್ನು ಜಾರಿ ನಿರ್ದೇಶನಾ ಲಯ ಬಂಧಿಸಿತ್ತು. ಇದಾದ ಬೆನ್ನಲ್ಲೇ ಸೆಂಥಿಲ್‌ ಬಾಲಾಜಿ ಅವರನ್ನು ಸಂಪುಟದಿಂದ ರಾಜ್ಯಪಾಲ ಆರ್‌.ಎನ್‌.ರವಿ ವಜಾಗೊಳಿಸಿ ದ್ದರು. ಬಳಿಕ ಅಮಾನತು ಆದೇಶವನ್ನು ಹಿಂಪಡೆದಿದ್ದರು.