ತಮಿಳುನಾಡು: ತಮಿಳುನಾಡಿನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ ಈಮೇಲ್ ಸಂದೇಶ ಬಂದಿದೆ ಎಂದು ಹೇಳಲಾಗುತ್ತಿದ್ದು, ತಕ್ಷಣ ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ತಮಿಳುನಾಡಿನ ಕಾಂಚಿಪುರಂ ಹಾಗೂ ಕೊಯಮತೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಬೆದರಿಕೆ ಇ-ಮೇಲ್ ಸಂದೇಶ ಬಂದ ತಕ್ಷಣ ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಈ ವೇಳೆ ಶಾಲಾ ಅಡಳಿತದ ಇಮೇಲ್ ಗೆ ಸಂದೇಶ ಬಂದಿರುವುದನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ ನಂತರ ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಸ್ಪಷ್ಟಪಡಿಸಿದರು. ವಿದ್ಯಾರ್ಥಿಗಳು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ತಕ್ಷಣ ನೀಟ್ಟುಸಿರು ಬಿಟ್ಟಿದ್ದಾರೆ.
ಕಳೆದ ತಿಂಗಳ ಹಿಂದೆ ಬೆಂಗಳೂರಿನ ಸುಮಾರು 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬೆ ಬೆದರಿಕೆ ಈಮೇಲ್ ಸಂದೇಶ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಆದರೆ ಇದುವರೆಗೂ ಈ ಮೇಲ್ ಸಂದೇಶ ಎಲ್ಲಿಂದ ಬಂದಿವೆ ಯಾರು ಕಳಿಸಿದ್ದಾರೆ ಎಂಬುದು ಇದುವರೆಗೂ ಪತ್ತೆಯಾಗಿಲ್ಲ ಈ ಕುರಿತು ತನಿಖೆ ನಡೆಯು ತ್ತಿದೆ.