Sunday, 8th September 2024

ಟೀ ಅಂಗಡಿಗೆ ನುಗ್ಗಿದ ಲಾರಿ: ಮಹಿಳೆ ಸೇರಿ ಐವರ ಸಾವು

ತಿರುಚಿ: ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಚಿ- ರಾಮೇಶ್ವರಂ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಏಕಾಏಕಿ ಟೀ ಅಂಗಡಿಗೆ ನುಗ್ಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸಿಮೆಂಟ್ ತುಂಬಿದ್ದ ಲಾರಿ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದು, ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ, ತಿರುಚ್ಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ಟೀ ಅಂಗಡಿಗೆ ನುಗ್ಗಿದೆ.

ವಾಹನಗಳಲ್ಲಿ ಓಶಕ್ತಿ ದೇವಸ್ಥಾನ ಹಾಗೂ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುತ್ತಿದ್ದ ಭಕ್ತರಿದ್ದರು. ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿದ್ದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!