Saturday, 14th December 2024

ತಮಿಳುನಾಡಿನಲ್ಲಿ ಟೊಮೆಟೊ ಕೆಜಿಗೆ 60 ರೂ. ನಿಗದಿ

ಚೆನ್ನೈ: ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ.

ಪಿಡಿಎಸ್ ಅಂಗಡಿಗಳಲ್ಲಿ ಟೊಮೆಟೊ ಕೆಜಿಗೆ 60 ರೂ.ನಿಗದಿಪಡಿಸಿದ್ದು, ಪ್ರತಿ ವ್ಯಕ್ತಿಗೆ 1 ಕೆಜಿ ಮಾರಾಟವನ್ನು ನಿರ್ಬಂಧಿಸಲಾಗಿದೆ ಎಂದು ರಾಜ್ಯದ ನಾಗರಿಕ ಸರಬರಾಜು ಇಲಾಖೆ ಮೂಲಗಳು ತಿಳಿಸಿವೆ.

ತಮಿಳುನಾಡು ಶೀಘ್ರದಲ್ಲೇ ಪಡಿತರ ಅಂಗಡಿಗಳ ಮೂಲಕ ಟೊಮೆಟೊ ಮಾರಾಟ ವನ್ನು ಪ್ರಾರಂಭಿಸಲಿದೆ. ತಮಿಳುನಾಡು ಸಹಕಾರಿ ಸಚಿವ ಎಸ್. ಪೆರಿಯಕರುಪ್ಪನ್ ಅವರು ಟೊಮೇಟೊ ಮಾರಾಟಕ್ಕೆ ಸಂಬಂಧಿಸಿದಂತೆ ಸೂಕ್ಷ್ಮ ಅಂಶಗಳನ್ನು ಚರ್ಚಿಸಲು ರಾಜ್ಯ ಸಚಿವಾಲಯದಲ್ಲಿ ಸಭೆ ನಡೆಸಿದ್ದರು.

ಟೊಮೆಟೊ ಬೆಲೆ ಏರಿಕೆಯಾಗುತ್ತಲೇ ಇದ್ದರೆ, ಗ್ರಾಹಕರಿಗೆ ತೊಂದರೆಯಾಗದಂತೆ ಹೆಚ್ಚಿನ ಉತ್ಪನ್ನಗಳನ್ನು ಖರೀದಿಸಲು ಮತ್ತು ಕಡಿಮೆ ಬೆಲೆಗೆ ಮಾರಾಟ ಮಾಡಲು ರಾಜ್ಯ ಸರ್ಕಾರವು ಮುಂದಿನ ಕ್ರಮಗಳನ್ನು ಪ್ರಾರಂಭಿಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ.