ಪಣಜಿ: ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನ ಗೋವಾ ಪೀಠ ಏ.11 ಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ತೇಜ್‍ಪಾಲ್ ರವರ ಅರ್ಜಿಯ ವಿಚಾರಣೆ ಏ.1 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಇನ್ ಕ್ಯಾಮರಾ ವಿಚಾರಣೆಗಾಗಿ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ತೇಜ್‍ಪಾಲ್ ರವರು ಸುಪ್ರಿಂ ಕೋರ್ಟ್ ನ ಮೆಟ್ಟಿಲೇರಿದ್ದರು.
ಏ.1 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಳ್ಳಲಿದೆ. ಇದರಿಂದಾಗಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ಯನ್ನು ಮುಂದೂಡಬೇಕು ಎಂದು ತರುಣ್ ತೇಜ್‍ಪಾಲ್ ಪರ ವಕೀಲರು ಬಾಂಬೆ ಹೈಕೋರ್ಟ್ ಗೋವಾ ಪೀಠದಲ್ಲಿ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಬಾಂಬೆ ಹೈಕೋರ್ಟ್ ನ ಗೋವಾ ಪೀಠವು ಈ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11 ಕ್ಕೆ ಮುಂದೂಡಿದೆ.