Friday, 13th December 2024

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರ

ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರವಾಗಿದೆ.

ಉಸಿರಾಟದ ತೊಂದರೆಯಿಂದ ತರುಣ್ ಅವರು ಪ್ರಜ್ಞಾಹೀನರಾಗಿದ್ದು, ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಕರೊನಾ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದರು. ನ.2ರಂದು ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದ ರಿಂದ ಪುನಃ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮುಂದಿನ 48 ರಿಂದ 72 ಗಂಟೆಗಳು ನಿರ್ಣಾಯಕ ಸಮಯವಾಗಿದ್ದು ವೈದ್ಯರು ತಮ್ಮ ಕೈಲಾದ ಎಲ್ಲ ಪ್ರಯತ್ನಗಳನ್ನು ಮಾಡು ತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.