Sunday, 8th September 2024

ಕೇರಳದಲ್ಲಿ ಸಾರ್ವಜನಿಕ ಸಾರಿಗೆ ವೆಚ್ಚ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಇತ್ತೀಚಿಗೆ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಯಾಗುತ್ತಿರುವ ಪರಿಣಾಮ ಇಂದಿನಿಂದ ಸಾರ್ವಜನಿಕ ಸಾರಿಗೆ ವೆಚ್ಚವನ್ನ ಏರಿಸಲಾಗಿದೆ. ಪ್ರಯಾಣ ದರ ಏರಿಕೆಯ ದರದ ಜೊತೆಗೆ ವಿದ್ಯಾರ್ಥಿಗಳ ಪಾಸ್‌ ದರವನ್ನು ಕೂಡ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಸ್‌, ಆಟೋ, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿತ್ತು.

ಖಾಸಗಿ ಬಸ್‌ ಮಾಲೀಕರು ಟಿಕೆಟ್‌ ದರವನ್ನು 8 ರಿಂದ 12 ರೂಪಾಯಿಗೆ ಏರಿಕೆ ಮಾಡಬೇಕು ಮತ್ತು ಪ್ರತಿ ಕಿಲೋಮೀಟರ್‌ಗೆ 90 ಪೈಸೆಯಿಂದ 1.10 ಪೈಸೆ ಹೆಚ್ಚಿಸಬೇಕು ಎಂದು ಒತ್ತಾಯಿಸಿತ್ತು.

ಆದರೆ ಸರ್ಕಾರ ಪ್ರಯಾಣಿಕರ ದರವನ್ನು 8 ರಿಂದ 10 ರೂಪಾಯಿಗೆ ಹಾಗೂ ಪ್ರತಿ ಕಿಲೋಮೀಟರ್‌ಗೆ 90 ಪೈಸೆಯಿಂದ 1 ರೂಪಾ ಯಿಗೆ ಹೆಚ್ಚಿಸಲು ನಿರ್ಧಾರ ಮಾಡಿದೆ. ಅಲ್ಲದೆ ವಿದ್ಯಾರ್ಥಿಗಳ ಪಾಸ್‌ ದರ ಹೆಚ್ಚಿಸುವ ವಿಚಾರವನ್ನು ಪರಿಶೀಲಿಸಲು ಆಯೋಗ ರಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಟೋ ದರ ಕೂಡ ಹೆಚ್ಚಾಗಿದ್ದು, ಎರಡು ಕಿಲೋಮೀಟರ್‌ಗಳಿಗೆ 30 ರೂಪಾಯಿಗೆ ಏರಿಸಲು ನಿರ್ಧರಿಸಿದ್ದು, ಒಂದೂವರೆ ಕಿಲೋಮೀಟರ್‌ಗೆ ಈಗಿರುವ 25 ರೂಪಾಯಿ, ನಂತರ ಪ್ರತಿ ಕಿಲೋಮೀಟರ್‌ಗೆ ಈಗಿರುವ 12 ರೂಪಾಯಿಯಂತೆ, ನಂತರ ಕಿಲೋಮೀಟರ್‌ಗೂ ಕೂಡ 15 ರೂಪಾಯಿಗೆ ಹೆಚ್ಚಿಸಲಾಗಿದೆ.

 

error: Content is protected !!