Friday, 22nd November 2024

ಟೀ ಮಾರುವ ವ್ಯಕ್ತಿಗೆ ಬಿಜೆಪಿ ಟಿಕೆಟ್

ವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟೀ ಮಾರುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಶಿಮ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ್ ಸೂದ್ ಟೀ ಸ್ಟಾಲ್ ನಡೆಸುತ್ತಿದ್ದಾರೆ. ಈ ಹಿಂದೆ ಅವರು ಎರಡು ಸಲ ಶಿಮ್ಲಾ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಅವಕಾಶ ಮಾಡಿ ಕೊಟ್ಟಿದೆ.

ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸಚಿವ ಸುರೇಶ್ ಭಾರದ್ವಾಜ್ ಅವರಿಗೆ ಬೇರೆ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. 1970 ರಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿರುವ ಸಂಜಯ್ ಸೂದ್ ಸ್ಪರ್ಧೆಗೆ ಅವಕಾಶ ನೀಡಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ.

ನವೆಂಬರ್ 12 ರಂದು ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.