Wednesday, 8th January 2025

Telangana Horror: ಪ್ರೀತಿಗೆ ಪೋಷಕರ ವಿರೋಧ- ಬೆದರಿಕೆಗೆ ಹೆದರಿ ಕಾರಿಗೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಸಜೀವ ದಹನ

Telangana Horror

ಹೈದರಾಬಾದ್:‌ ಕಾರಿಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಘಟ್‌ಕೇಸರ್‌ನ ಘನಪುರ ಹೊರವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಪರ್ವತಂ ಶ್ರೀರಾಮ್‌ ಹಾಗೂ  ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದ್ದು, ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.(Telangana Horror)

ವರದಿಗಳ ಪ್ರಕಾರ, ನಲ್ಗೊಂಡ ಜಿಲ್ಲೆಯ ಬೀಬಿನಗರದ ನಿವಾಸಿಯಾಗಿರುವ ಶ್ರೀರಾಮ್ ನರಪಲ್ಲಿಯಲ್ಲಿರುವ ಸೈಕಲ್ ಅಂಗಡಿಯಲ್ಲಿ ಕೆಲಸಗಾರರಾಗಿದ್ದ. ಸೈಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಬಾಲಕಿಯನ್ನು ಭೇಟಿಯಾಗಿದ್ದ. ಅವರಿಬ್ಬರೂ ಆತ್ಮೀಯ ಸ್ನೇಹಿತರಾಗಿದ್ದರು ಮತ್ತು ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.

ತಾವು ಸಾಯುವ ಮುನ್ನ ಅವರು ಡೆತ್‌ನೋಟ್‌ ಬರೆದಿಟ್ಟಿದ್ದು, ಮಹೇಶ್ ಎಂಬುವವರ ಕಿರುಕುಳದಿಂದ ಪ್ರೇಮಿಗಳು ಈ ರೀತಿ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮಹೇಶ್‌, ಮೃತರ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಂಡು ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ. ಹಣ ನೀಡದಿದ್ದಲ್ಲಿ ಕುಟುಂಬಸ್ಥರ ಬಳಿ ತಮ್ಮ ಸಂಬಂಧವನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ ಎಂದು ಬರೆದಿದ್ದಾರೆ.

ಶ್ರೀರಾಮ್ ಮಹೇಶ್‌ಗೆ ಈಗಾಗಲೇ 1.35 ಲಕ್ಷ ರೂ. ಪಾವತಿಸಿದ್ದ. ಆದರೂ ಕೂಡ ಕಿರುಕುಳ ನಿಂತಿರಲಿಲ್ಲ. ಕಿರುಕುಳಕ್ಕೆ ಬೇಸತ್ತು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಸಮೀಪದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಕಣ್ಣಾರೆ ಕಂಡಿದ್ದಾರೆ. ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಗಮನಕ್ಕೆ ಬಂದಿದೆ. ನೀರಿನ ಪೈಪ್‌ಲೈನ್ ಇಲ್ಲದ ಕಾರಣ ಬಕೆಟ್ ನೀರನ್ನು ಬಳಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಅಷ್ಟರಲ್ಲಾಗಲೇ ಇಡೀ ಕಾರಿಗೆ ಬೆಂಕಿ ಹತ್ತಿಕೊಂಡಿತ್ತು.

ಬೆಂಕಿ ಹೊತ್ತಿಕೊಂಡ ಕಾರಿನಿಂದ ಯುವಕ ಓಡಿ ಬಂದು ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಬಾಲಕಿ ಸಂಪೂರ್ಣ ಸುಟ್ಟು ಕರಕಲಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ : ಛಾತ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಬೆಂಕಿ ಅವಘಡ: 25 ಜನರಿಗೆ ಗಾಯ

Leave a Reply

Your email address will not be published. Required fields are marked *