Friday, 13th December 2024

ತೆಲಂಗಾಣ: ಕಾಂಗ್ರೆಸ್​ ಬಹುದೊಡ್ಡ ಪಕ್ಷ, ಸಿಎಂ ಪ್ರಮಾಣವಚನ ಸ್ವೀಕಾರ ಇಂದು

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್​ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್​ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ನಾಲ್ಕು ರಾಜ್ಯಗಳ ಪೈಕಿ ಹಿಂದಿ ಪ್ರಾಬಲ್ಯದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ದಕ್ಷಿಣ ಭಾರತದ ತೆಲಂಗಾಣದಲ್ಲಿ ಕಾಂಗ್ರೆಸ್​ ಜಯ ದಾಖಲಿಸಿದೆ. ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಭರ್ಜರಿ ಗೆಲುವು ಕಂಡಿದ್ದ ಕಾಂಗ್ರೆಸ್​ ಈಗ ಆರು ತಿಂಗಳ ಅವಧಿಯಲ್ಲಿ ದಕ್ಷಿಣದ ಭಾರತದ ಎರಡನೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಾಗಿದೆ.

ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಕೆಸಿಆರ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುಂದಾಳತ್ವ ವಹಿಸಿಕೊಂಡಿದ್ದ 56 ವರ್ಷ ವಯಸ್ಸಿನ ರೇವಂತ್ ರೆಡ್ಡಿ ಮುಖ್ಯಮಂತ್ರಿ ಹುದ್ದೆಯ ರೇಸ್​ನಲ್ಲಿದ್ದಾರೆ.