Saturday, 14th December 2024

ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೊದಲ ಸಭೆ ಇಂದು

ಹೈದರಾಬಾದ್: ತೆಲಂಗಾಣದಲ್ಲಿ ಹೊಸದಾಗಿ ರಚನೆಯಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತನ್ನ ಮೊದಲ ಸಭೆಯನ್ನು ಶನಿವಾರ ಹೈದರಾಬಾದ್ ನಲ್ಲಿ ನಡೆಸಲಿದೆ.

ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದಂತೆ ಹಿರಿಯ ನಾಯಕರು ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಿಡಬ್ಲ್ಯೂಸಿ ಸಭೆಯ ವಿವರಗಳ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಾವು ಹೈದರಾಬಾದ್ನಲ್ಲಿ ಮೊದಲ ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ) ನಡೆಸುತ್ತೇವೆ ಎಂದು ತಿಳಿಸಿದರು.