Saturday, 14th December 2024

ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ವೆರಾವಲ್ (ಗುಜರಾತ್): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಸೋಮನಾಥ ದೇವಾಲಯದ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಮೋದಿಯವರು ಸೋಮ ನಾಥ ದೇವಾಲಯಕ್ಕೆ ಭೇಟಿ ನೀಡಿರು ವುದು ವಿಧಾನಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಮಹತ್ವ ಪಡೆದುಕೊಂಡಿದೆ.
ಸೋಮನಾಥ ದೇವಾಲಯ ಭೇಟಿ ಬಳಿಕ ಮೋದಿ ಯವರು ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುವ ಸಾಧ್ಯತೆಗಳಿವೆ.
ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ನಂತರ ಮೋದಿಯವರು ಸೌರಾಷ್ಟ್ರ ಪ್ರದೇಶ ದಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವೆರಾವಲ್, ಧೋರಾರ್ಜಿ, ಅಮ್ರೇಲಿ ಮತ್ತು ಬೊಟಾಡ್ನಲ್ಲಿ ಸ್ಥಳಗಳಲ್ಲಿ ರ್ಯಾಲಿಗಳನ್ನು ನಡೆಸ ಲಾಗುತ್ತಿದೆ ಎಂದು ತಿಳಿದುಬಂದಿದೆ.