ಉನ್ನಾವೋ: ಜ.22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನ, ಇಲ್ಲಿನ ದೇವಸ್ಥಾನದ ಕಾರ್ಯಕ್ರಮಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.
ಹತೈಗೈದವರು ಬೇರೆ ಸಮುದಾಯದವರಾಗಿದ್ದು, ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದಾರೆ.
ದೂರಿನ ಆಧಾರದ ಮೇಲೆ ಕಾಳೇ ಖಾನ್ ಮತ್ತು ಆತನ ಸಹಚರರ ವಿರುದ್ಧ ಗಂಗಾಘಾಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಗಾಯಾಳು ವಿನೋದ್ ಕಶ್ಯಪ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಸಿಂಗ್ ಹೇಳಿದರು.
ಕಶ್ಯಪ್ ಅವರ ಪತ್ನಿ ದೂರಿನ ಮೇಲೆ ದಾಖಲಾದ ಎಫ್ಐಆರ್ ಉಲ್ಲೇಖಿಸಿದ ಎಸ್ಪಿ ಸಿದ್ಧಾರ್ಥ್ ಶಂಕರ್ ಮೀನಾ, ಧಾರ್ಮಿಕ ನೆಲೆಯಲ್ಲಿ ಘಟನೆ ನಡೆದಿದೆ ಎಂಬುದನ್ನು ನಿರಾಕರಿಸಿದರು.
ಕಶ್ಯಪ್ ಮತ್ತು ಅವರ ಸಹಚರರು ಗಂಗಾಘಾಟ್ ಕೊಟ್ವಾಲಿಯಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದಾಗ ದಾಳಿ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿ ದ್ದಾರೆ. ದಾಳಿಕೋರರಲ್ಲಿ ಒಬ್ಬರು ರೌಡಿ ಶೀಟರ್ ಆಗಿದ್ದು, ಘಟನೆಯ ನಂತರ ಸ್ಥಳೀಯರು ರಸ್ತೆ ತಡೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.