Thursday, 12th December 2024

Terror Attack: ಗುಂಡೇಟು ಬಿದ್ದುಒದ್ದಾಡುತ್ತಿದ್ದರೂ ಕರ್ತವ್ಯ ಮೆರೆದ ಹೆಡ್‌ ಕಾನ್‌ಸ್ಟೇಬಲ್‌; ಉಗ್ರನನ್ನು ಬಲಿ ಪಡೆದೇ ಹುತಾತ್ಮ

terror attack

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ(Terror Attack) ಹೆಚ್ಚಾಗಿದ್ದು, ನಿನ್ನೆ ನಡೆದ ಸೇನಾ ಕಾರ್ಯಾಚರಣೆ ವೇಳೆ ಪಾಕ್‌ ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿ ವೇಳೆ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ಬಶೀರ್‌ ಅಹ್ಮದ್‌ ಮೋಸ್ಟ್‌ ವಾಟೆಂಡ್‌ ಉಗ್ರನೊಬ್ಬನನ್ನು ಹತ್ಯೆ ಮಾಡಿ ಬಳಿಕ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

ಕಥುವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಂಡ್ಲಿಯ ಕೋಗ್‌ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ನಿನ್ನೆ ತಡೆರಾತ್ರಿಯಿಂದಲೇ ಕಾರ್ಯಾಚರಣೆ ಶುರುವಾಗಿದ್ದು, ಉಗ್ರರು ಮತ್ತು ಭದ್ರತಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಡೆಪ್ಯೂಟಿ ಎಸ್‌ಪಿ ಸುಖ್‌ಬೀರ್‌ ಮತ್ತು ಕಾನ್‌ಸ್ಟೇಬಲ್‌ ಬಶೀರ್‌ ಅಹ್ಮದ್‌ಗೆ ಗುಂಡೇಟು ತಗುಲಿತ್ತು. ಇವರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.

ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೂ ಛಲ ಬಿಡದ ಬಶೀರ್‌, ಉಗ್ರನೊಬ್ಬನ ಮೇಲೆ ಗುಂಡು ಹಾರಿಸಿ ಆತನನ್ನು ಹತ್ಯೆಗೈದಿದ್ದಾರೆ. ಬಳಿಕ ಹುತಾತ್ಮರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮೂರರಿಂದ ನಾಲ್ಕು ಉಗ್ರರು ಅವಿತಿರುವ ಬಗ್ಗ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿತ್ತು. ಇನ್ನು ಈ ಕಾರ್ಯಾರಣೆ ಮುಂದುವರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಣಿವೆ ರಾಜ್ಯದಲ್ಲಿ ಆಗಾಗ ಉಗ್ರರ ದಾಳಿ ನಡೆಯುತ್ತಿದ್ದು, ಸೆ.14ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆಂದು ಜಮ್ಮು-ಕಾಶ್ಮೀರ(Jammu and Kashmir)ಕ್ಕೆ ತಲುಪುವ ಮುನ್ನವೇ ಮೂರು ಪ್ರತ್ಯೇಕ ಸೇನಾ ಕಾರ್ಯಾಚರಣೆ(JK Encounter) ನಡೆದಿತ್ತು. ಆ ವೇಳೆ ಒಟ್ಟು ಐವರು ಉಗ್ರರನ್ನುಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು.

ಇದಾದ ಕೆಲವೇ ದಿನಗಳಲ್ಲಿ ಐದು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರ(Jammu and Kashmir)ದ ಪುಲ್ವಾಮಾ(Pulwama Terror attack)ದಲ್ಲಿ ನಡೆದ ಭಯೋತ್ಪಾದಕಾ ದಾಳಿಯ ಆರೋಪಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದ. ಜಮ್ಮುವಿನ ಸರ್ಕಾರಿ ಮೆಡಿಕಲ್‌ ಕಾಲೇಜಿನ ಆಸ್ಪತ್ರೆಯಲ್ಲಿ ಬಿಲಾಲ್‌ ಅಹ್ಮದ್‌ ಕುಚೇ(Bilal Ahmad Kuchey) ಎಂಬಾತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸೆಪ್ಟೆಂಬರ್ 17 ರಂದು ಕಿಶ್ತ್ವಾರ್ ಜಿಲ್ಲಾ ಜೈಲಿನಲ್ಲಿ ಅನಾರೋಗ್ಯಕ್ಕೆ ಒಳಗಾದ ಕುಚೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. 2020ರ ಆಗಸ್ಟ್ 25ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕುಚೇ ಮತ್ತು ಇತರ 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಫೈಲ್‌ ಮಾಡಿದೆ. ಈ ಪ್ರಕರಣದಲ್ಲಿ ಬಂಧಿತರಾದ ಏಳು ಆರೋಪಿಗಳಲ್ಲಿ ಕುಚೇ ಕೂಡ ಸೇರಿದ್ದಾನೆ.

ಈ ಸುದ್ದಿಯನ್ನೂ ಓದಿ: Pulwama Terror attack: ಪುಲ್ವಾಮ ದಾಳಿಯ ಉಗ್ರ ಹೃದಯಾಘಾತದಿಂದ ಸಾವು