Friday, 13th December 2024

Terrorist Encounter : ಶ್ರೀನಗರದಲ್ಲಿ ಗುಂಡಿನ ಚಕಮಕಿ; 2 ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Terrorist Encounter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ (Terrorist Encounter) ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಥುವಾ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.

ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಕಿಶ್ತ್ವಾರ್‌ನ ಚಟ್ರೂನಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು. ಎನ್‌ಕೌಂಟರ್‌ ಇನ್ನೂ ನಡೆಯುತ್ತಿದೆ ಎಂದು ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿರುವ ಅದೇ ಭಯೋತ್ಪಾದಕರು ಜುಲೈನಲ್ಲಿ ದೋಡಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಅಲ್ಲಿ ಅಧಿಕಾರಿ ಸೇರಿದಂತೆ ನಾಲ್ವರು ಸೈನಿಕರು ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mpox Vaccine : ಮಂಕಿ ಪಾಕ್ಸ್‌ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಒಪ್ಪಿಗೆ

ಸೆಪ್ಟೆಂಬರ್ 18ರಂದು ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ , ಪುಲ್ವಾಮಾ, ಶೋಪಿಯಾನ್ ಮತ್ತು ಕುಲ್ಗಾಮ್ ಜಿಲ್ಲೆಗಳ 16 ಸ್ಥಾನಗಳು ಸೇರಿದಂತೆ ಚೆನಾಬ್ ಕಣಿವೆ ಪ್ರದೇಶದ ದೋಡಾ, ಕಿಶ್ತ್ವಾರ್ ಮತ್ತು ರಂಬನ್ ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಕೆಲವು ದಿನಗಳ ಮೊದಲು ಎನ್‌ಕೌಂಟರ್‌ ನಡೆದಿದೆ.

ಜಮ್ಮು, ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಕ್ರಮವಾಗಿ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಎರಡನೇ ಮತ್ತು ಮೂರನೇ ಹಂತಗಳಲ್ಲಿ ಮತದಾನ ನಡೆಯಲಿದೆ.