Thursday, 19th December 2024

Terrorist Encounter: ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ; 5 ಉಗ್ರರು ಉಡೀಸ್‌

Terror attack

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಐದು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕುಲ್ಗಾಮ್‌ ಜಿಲ್ಲೆಯ ಬೆಹಿಬಾಘ್‌ ಪ್ರದೇಶದಲ್ಲಿ ಉಗ್ರರು ಮತ್ತು ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಐವರು ಉಗ್ರರನ್ನು ಮಟ್ಟ ಹಾಕುವಲ್ಲಿ ಸೇನೆ ಯಶಸ್ವಿಯಾಗಿದೆ(Terrorist Encounter).

ಕದ್ದಾರ್‌ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ಗುಂಡಿನ ಚಕಮಕಿ ಆರಂಭವಾಗಿತ್ತು. ಈ ವೇಳೆ ಗುಂಡು ತಗುಲಿ ಐವರು ಉಗ್ರರು ಹತರಾಗಿದ್ದಾರೆ. ಇನ್ನು ಕೆಲವು ಉಗ್ರರು ಎಸ್ಕೇಪ್‌ ಆಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.

“19 ಡಿಸೆಂಬರ್ 24 ರಂದು, ಭಯೋತ್ಪಾದಕರ ಚಲನವಲನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಕುಲ್ಗಾಮ್‌ನ ಕಡರ್‌ನಲ್ಲಿ ಪ್ರಾರಂಭಿಸಿದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸೇನೆ ಇದಕ್ಕೆ ಪ್ರತಿದಾಳಿ ನಡೆಸಿತು ಎಂದು ಭಾರತೀಯ ಸೇನೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದೆ.

ಈ ತಿಂಗಳ ಆರಂಭದಲ್ಲಿ, ಶ್ರೀನಗರದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಅಕ್ಟೋಬರ್‌ನಲ್ಲಿ ಮಧ್ಯ ಕಾಶ್ಮೀರದ ಗಗನ್‌ಗೀರ್‌ನಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ನಡೆದ ಮಾರಣಾಂತಿಕ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು.

ಈ ಸುದ್ದಿಯನ್ನೂ ಓದಿ: ಎರಡು ಪ್ರತ್ಯೇಕ ಎನ್ಕೌಂಟರ್‌: ಮೂವರು ಉಗ್ರರು ಹತ