Saturday, 23rd November 2024

ಯೋಗಿ ಆದಿತ್ಯ ನಾಥ್’ರಿಂದ ದಿ ಕೇರಳ ಸ್ಟೋರಿ ಚಿತ್ರ ವೀಕ್ಷಣೆ

ಲಖನೌ: ಅದಾ ಶರ್ಮಾ ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ ಸಿನಿಮಾವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ವೀಕ್ಷಣೆ ಮಾಡಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಯೋಗಿ, ‘ನಾನು ನನ್ನ ಸಚಿವ ಸಹೋದ್ಯೋಗಿಗಳ ಜೊತೆ ಸಿನಿಮಾ ನೋಡಿದೆ. ದಿ ಕೇರಳ ಸ್ಟೋರಿ ಚಿತ್ರ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದರಿಂದ ಇಡೀ ಟೀಮ್ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿತ್ತು. ಇದೇ ಸಂದರ್ಭದಲ್ಲಿ ಸಿಎಂ, ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂಪಾಯಿ ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ.

ದಿ ಕೇರಳ ಸ್ಟೋರಿ ಗೆಲ್ಲುತ್ತಿದ್ದಂತೆಯೇ ಅದಾ ಶರ್ಮಾಗೆ ಭರ್ಜರಿ ಆಫರ್ಸ್ ಬರುತ್ತಿವೆ.