Thursday, 12th December 2024

ಉ.ಪ್ರದೇಶ ಚುನಾವಣೆ: ನಾಳೆ ಮೂರನೇ ಹಂತದ ಮತದಾನ

ಲಕ್ನೋ: ಉತ್ತರ ಪ್ರದೇಶದ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮೂರನೇ ಹಂತದ ಮತದಾನ ನಡೆಯಲಿದೆ.

ರಾಜ್ಯ ಚುನಾವಣೆಯ ಮೂರನೇ ಹಂತದ ಬಹಿರಂಗ ಪ್ರಚಾರ ಶುಕ್ರವಾರ ಅಂತ್ಯಗೊಂಡಿದೆ. ಮತದಾರರನ್ನು ಸೆಳೆಯಲು ಪಕ್ಷಗಳ ಹಿರಿಯ ನಾಯಕರು ಅಂತಿಮ ಪ್ರಯತ್ನ ನಡೆಸುತ್ತಿದ್ದಾರೆ.

ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, ಭಾನುವಾರ ಬೆಳಗ್ಗೆ ಮತದಾನ ಆರಂಭ ವಾಗಲಿದ್ದು, ಸಂಜೆ 6ರವರೆಗೆ ನಡೆಯಲಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧಿಸುತ್ತಿರುವ ಕರ್ಹಾಲ್ ವಿಧಾನಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮತದಾನ ನಡೆಯ ಲಿದ್ದು, ಈ ಕ್ಷೇತ್ರದಿಂದ ಬಿಜೆಪಿ ಕೇಂದ್ರ ಸಚಿವ ಎಸ್ಪಿ ಸಿಂಗ್ ಬಾಘೇಲ್ ಅವರನ್ನು ಕಣಕ್ಕಿಳಿಸಿದೆ. ಸಮಾಜವಾದಿ ಹಿರಿಯ ನಾಯಕ ಶಿವಪಾಲ್ ಸಿಂಗ್ ಯಾದವ್ ಅವರ ಭವಿಷ್ಯ ನಿಧರಿ ಸಲಿದ್ದು, ತಮ್ಮ ಸಾಂಪ್ರದಾಯಿಕ ಜಸ್ವಂತ್ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್ಪುರಿ, ಫರುಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್ಪುರ್, ಹಮೀರ್ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.