ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ತಿರುವನಂತಪುರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡಿದರು.
ಈ ವೇಳೆ, ಪ್ರಧಾನಿ ಮೋದಿಯವರಲ್ಲದೆ, ಕೇಂದ್ರ ರೈಲ್ವೆ ಸಚಿವರು, ಕೇರಳ ಸಿಎಂ, ಕೇರಳ ರಾಜ್ಯಪಾಲರು ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಉಪಸ್ಥಿತರಿದ್ದರು. ಇನ್ನು ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಕೊಚ್ಚಿಯಲ್ಲಿ ವಾಟರ್ ಮೆಟ್ರೋವನ್ನು ಉದ್ಘಾಟಿಸಲಿದ್ದಾರೆ.
ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ಆಗಮಿಸಿದ್ದಾರೆ. ಸೋಮವಾರ ಪ್ರಧಾನಿ ಮೋದಿ ಚರ್ಚ್ನ ಪಾದ್ರಿ ಗಳನ್ನು ಭೇಟಿ ಮಾಡಿದರು. ಸುಮಾರು ಎರಡು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ರೋಡ್ ಶೋ ಮಾಡಿದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಜನಸಾಮಾನ್ಯರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ರಸ್ತೆಯಲ್ಲಿ ನೆರೆದಿದ್ದರು.