Friday, 13th December 2024

ಮೊಹಮದ್ ಶಮಿ ಪತ್ನಿಗೆ ಅತ್ಯಾಚಾರ ಬೆದರಿಕೆ: ಸೂಕ್ತ ಭದ್ರತೆಗೆ ಹೈಕೋರ್ಟ್‌ ಆದೇಶ

ಕೋಲ್ಕತಾ: ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಪತ್ನಿಗೆ ಅತ್ಯಾಚಾರ ಬೆದರಿಕೆ ಬಂದಿದ್ದು, ತಮ್ಮ ಮನವಿಯನ್ನು ಪೊಲೀಸರು ನಿರ್ಲಕ್ಷ್ಯ ಮಾಡಿರುವುದಾಗಿ ದೂರಿ ಅವರು ಕೋಲ್ಕತ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹಸೀನ್​​​ ಜಹಾನ್ ಅವರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ಪೊಲೀಸ್​ ಇಲಾಖೆಗೆ ಹೈಕೋರ್ಟ್​ ಆದೇಶಿಸಿದೆ.

ಶಮಿ ಪತ್ನಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಶುಭ ಕೋರಿರುವುದಕ್ಕೆ ಕೊಲೆ, ಅತ್ಯಾಚಾರದ ಬೆದರಿಕೆಗಳು ಬಂದಿದ್ದವು. ಇದರಿಂದಾಗಿ ತನಗೆ ಮತ್ತು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅವರು ಪೊಲೀಸರ ಮೊರೆ ಹೋಗಿದ್ದರು.

ಅರ್ಜಿದಾರರಿಗೆ ಯಾವುದೇ ರೀತಿಯ ಪ್ರಾಣ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು. ಅವರ ದೂರಿನ ಪ್ರಕಾರ ಕ್ರಮ ಕೈಗೊಳ್ಳ ಬೇಕು ಮತ್ತು ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದೆ.