ನವದೆಹಲಿ: ಸ್ವಾತಂತ್ರ್ಯ ದಿನದಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸುವ ಬೆದರಿಕೆ ಆರೋಪದಡಿ ಪೊಲೀಸರು ಇಬ್ಬರನ್ನು ಭಾನುವಾರ ಬಂಧಿಸಿದ್ದಾರೆ.
ಬಂಧಿತರನ್ನು ವಿಕಾಸ್ ಸೆಹ್ರಾವತ್ (30) ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ. ಉತ್ತಮ್ ನಗರ ನಿವಾಸಿಗಳು ಎಂದು ತಿಳಿದುಬಂದಿದೆ.
ವಿಡಿಯೊದಲ್ಲಿ ಮಾಜಿ ಶಾಸಕ ಅಲ್ಕಾ ಲಂಬಾ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಬಂಧಿಸಲಾಗಿದೆ. ತಾನು 2018ರಿಂದ ವಿಶ್ವ ಹಿಂದೂ ಪರಿಷತ್ ಜೊತೆಗೆ ಗುರುತಿಸಿಕೊಂಡಿದ್ದೇನೆ ಎಂದೂ ಬಂಧಿತ ತಿಳಿಸಿದ್ದಾನೆ’ ಎಂದೂ ತಿಳಿಸಿದ್ದಾರೆ.
ಜೆಎನ್‌ಯೂಗೂ ಸೆಹ್ರಾವತ್‌ನಿಗೂ ಸಂಬಂಧವಿಲ್ಲ. ಗಮನ ಸೆಳೆಯುವ ಉದ್ದೇಶದಿಂದ ಈ ವಿಡಿಯೊ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.