Friday, 13th December 2024

ನ.20-22ರವರೆಗೆ ಮೂರು ದಿನ ಮೋದಿ ರ್ಯಾಲಿ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸೌರಾಷ್ಟ್ರದಲ್ಲಿ ನ.20-22 ರಿಂದ ಸತತ ಮೂರು ದಿನಗಳ ಕಾಲ ರ್ಯಾಲಿಗಳನ್ನು ನಡೆಸಲಿದ್ದಾರೆ.
ಈ ರ್ಯಾಲಿಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ನ.20 ರಂದು ಸೌರಾಷ್ಟ್ರದಲ್ಲಿ ಮೂರು, ನ.21 ರಂದು ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರದಲ್ಲಿ ಎರಡು ಮತ್ತು ನ.22 ರಂದು ಸೌರಾಷ್ಟ್ರದಲ್ಲಿ ಎರಡು ರ್ಯಾಲಿಗಳನ್ನು ಪ್ರಧಾನಿ ನಡೆಸಲಿದ್ದಾರೆ.
ಜಿ20 ಶೃಂಗಸಭೆಗಾಗಿ ಪ್ರಧಾನಿ ದೇಶದಿಂದ ಹೊರಗಿದ್ದ ಕಾರಣ, ಅನುಮೋದನೆ ಪಡೆಯಲು ಮತ್ತು ರ್ಯಾಲಿ ಸ್ಥಳಗಳನ್ನು ಅಂತಿಮಗೊಳಿಸಲು ಪಕ್ಷವು ಅವರ ಮರಳುವಿಕೆಗಾಗಿ ಕಾಯು ತ್ತಿತ್ತು.

ರಾಜ್ಯದ 182 ವಿಧಾನಸಭಾ ಸ್ಥಾನಗಳ ಪೈಕಿ 48 ಕ್ಷೇತ್ರಗಳು ಈ ಪ್ರದೇಶದಲ್ಲಿದ್ದು, ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ 182 ಸ್ಥಾನಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಗುಜರಾತ್ ಮತ್ತು ಹಿಮಾ ಚಲ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.