Sunday, 15th December 2024

ಲಷ್ಕರ್ ಸಂಘಟನೆಯ ಮೂವರು ಭಯೋತ್ಪಾದಕರ ಬಂಧನ

ಸೊಪೋರ್‌: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಗಳನ್ನು ತಫ್ಹೀಮ್ ರೆಯಾಜ್, ಸೀರತ್ ಶಾಬಾಜ್ ಮಿರ್ ಮತ್ತು ರಮೀಜ್ ಅಹ್ಮದ್ ಖಾನ್ ಎಂದು ಗುರುತಿಸಲಾಗಿದೆ. ವಲಸೆ ಕಾರ್ಮಿಕರ ಹತ್ಯೆ ಮತ್ತು ಅನೇಕ ಸ್ಥಳಗಳಲ್ಲಿ ನಡೆದ ಗ್ರೆನೇಡ್ ದಾಳಿಗಳಲ್ಲಿ ಈ ಉಗ್ರರ ಪಾತ್ರವಿರುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಮೂವರು ಉಗ್ರರು ಲಷ್ಕರ್-ಎ-ತೊಯ್ಬಾದ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲ್‌ಗಳು, ಮದ್ದುಗುಂಡುಗಳು ಹಾಗೂ ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.