Sunday, 15th December 2024

ಖಾಸಗಿ ಬಸ್ ಪಲ್ಟಿ: ಮೂವರ ಸಾವು

ಲಕ್ನೊ: ಅಯೋಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿ ದ್ದಾರೆ.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ದಿಲ್ಲಿಯಿಂದ ಉತ್ತರ ಪ್ರದೇಶದ ಸಿದ್ಧಾರ್ಥನಗರದ ಬನ್ಸಿಗೆ ತೆರಳುತ್ತಿತ್ತು.

ರಾಷ್ಟ್ರೀಯ ಹೆದ್ದಾರಿ-27ರಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಮುಂದಾದಾಗ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ ಎಂದು ವರದಿಯಾಗಿದೆ.