Thursday, 19th September 2024

ಕಳ್ಳ ಬೇಟೆಗಾರರಿಂದ ಮೂವರು ಪೊಲೀಸ್ ಸಿಬ್ಬಂದಿ ಹತ್ಯೆ

 ಭೋಪಾಲ್‌: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಕಳ್ಳ ಬೇಟೆ ಗಾರರು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.

ಆರೋಪಿಗಳ ಬಂಧನಕ್ಕೆ ಮುಂದಿನ ದಿನಗಳಲ್ಲಿ ಮಾದರಿಯಾಗುವ ಕ್ರಮಗಳನ್ನು ಕೈಗೊಳಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಗುನಾದಲ್ಲಿ ಕಳ್ಳ ಬೇಟೆಗಾರರನ್ನು ಪತ್ತೆ ಹಚ್ಚುವ ಸಂದರ್ಭ ನಮ್ಮ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದರು. ಇತಿಹಾಸದಲ್ಲಿ ಮಾದರಿ ಯಾಗುವ ಅಪರಾಧಿಗಳ ವಿರುದ್ಧ ಇಂತಹ ಕ್ರಮ ಕೈಗೊಳ್ಳಲಾಗುವುದು.

ದುಷ್ಕರ್ಮಿಗಳನ್ನು ಬಹುತೇಕ ಗುರುತಿಸ ಲಾಗಿದೆ. ತನಿಖೆ ನಡೆಯುತ್ತಿದೆ. ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ. ಕ್ರಿಮಿನಲ್‌ ಗಳು ಯಾವುದೇ ಬೆಲೆ ತೆತ್ತಾದರೂ ತಪ್ಪಿಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.

“ಪೊಲೀಸರ ತ್ಯಾಗವನ್ನು ನಾವು ವ್ಯರ್ಥ ಮಾಡಲು ಬಿಡುವುದಿಲ್ಲ. ಅವರ ಕುಟುಂಬಕ್ಕೆ ₹ 1 ಕೋಟಿ ನೀಡಲಾಗುವುದು ಮತ್ತು ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡಲಾಗುವುದು. ನಾವು ಅವರಿಗೆ ಅಂತಿಮ ನಮನ ಸಲ್ಲಿಸುತ್ತೇವೆ. ಸೈಟ್ ತಲುಪಲು ವಿಳಂಬವಾದ ಕಾರಣ ಗ್ವಾಲಿಯರ್ ಐಜಿಯನ್ನು ತೆಗೆದುಹಾಕಿದ್ದೇವೆ,” ಎಂದು ಮುಖ್ಯಮಂತ್ರಿ ಹೇಳಿದರು.

ಗುನಾ ಜಿಲ್ಲೆಯ ಆರೋನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೋಟಾರು ಸೈಕಲ್‌ಗಳಲ್ಲಿ 7-8 ದುಷ್ಕರ್ಮಿಗಳು ಇರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಪೊಲೀಸರು ಅವರನ್ನು ಎಲ್ಲಾ ಕಡೆಯಿಂದ ಸುತ್ತುವರಿದ ನಂತರ, ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು, ಇದರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದರು ಎಂದು ತಿಳಿಸಿದ್ದಾರೆ.