Thursday, 12th December 2024

ಮತ್ತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ: ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.

ಲೋಕಸಭೆಯಿಂದ ಅಮಾನತಾದ ಸಂಸದರ ಒಟ್ಟು ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿ.ಕೆ.ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು.

“ದೀಪಕ್ ಬೈಜ್, ಡಿ.ಕೆ.ಸುರೇಶ್, ನಕುಲ್ ನಾಥ್ ಅವರು ಸದನ ಮತ್ತು ಸಭಾಧ್ಯಕ್ಷರ ಗೌರವವನ್ನು ಸಂಪೂರ್ಣವಾಗಿ ಕಡೆಗಣಿಸಿ ಸದನದ ಬಾವಿಗೆ ಇಳಿದಿ ರುವುದನ್ನು ಸದನ ಗಂಭೀರವಾಗಿ ಪರಿಗಣಿಸಿದೆ. ಅಧಿವೇಶನದ ಉಳಿದ ಅವಧಿಗಾಗಿ ಅವರನ್ನು ಸದನದಿಂದ ಅಮಾನತುಗೊಳಿಸಬಹುದು” ಎಂದು ಜೋಶಿ ಹೇಳಿದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಪ್ರತಿಭಟನೆ ನಡೆಸದಂತೆ ಈ ಮೂವರು ಸಂಸದರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಸದನ ಸೇರುತ್ತಿದ್ದಂತೆಯೇ ಸಂಸದರ ಅಮಾನತು ಖಂಡಿಸಿ ತಮ್ಮ ಪ್ರತಿಭಟನೆ ಮುಂದುವರೆಸಿದರು.

ಭಾರಿ ಸಂಖ್ಯೆಯ ಸಂಸದರನ್ನು ಅಮಾನತು ಮಾಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಜಾಪ್ರಭುತ್ವದ ಕತ್ತು ಹಿಸುಕ ಲಾಗಿದೆ ಎಂದು ಹೇಳಿದ್ದಾರೆ.