Sunday, 15th December 2024

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಇಂದು ಸಂಜೆ ಪ್ರಧಾನಿ ಭಾಷಣ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಮೀಕ್ಷೆಗಳನ್ನು ಮೀರಿ ಗೆಲುವು ಸಾಧಿಸುವ ಸಾಧ್ಯತೆ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಅವರು ಮಾತನಾಡಲಿದ್ದಾರೆ.

ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 155 ಮತ್ತು ಛತ್ತೀಸ್‌ಗಢದ 90 ಸ್ಥಾನಗಳಲ್ಲಿ 54ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ 199 ಸ್ಥಾನಗಳಲ್ಲಿ ಬಿಜೆಪಿ 111 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಮುಂದಿದೆ. ಅಲ್ಲದೇ ತೆಲಂಗಾಂಣದಲ್ಲಿ ಈ ಹಿಂದಿನ ಜಯಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ.