ನವದೆಹಲಿ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಗುತ್ತಿಗೆ ಆಧಾರದ ನಾಲ್ಕು ವರ್ಷದ ಸೇವೆಯನ್ನು ವಿರೋಧಿಸಿ ದೆಹಲಿ, ಉತ್ತರ ಪ್ರದೇಶ, ಬಿಹಾರ, ಹರಿಯಾಣ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಪಂಜಾಬ್, ಜಾರ್ಖಂಡ್, ಅಸ್ಸಾಂ ಸೇರಿದಂತೆ ಅನೇಕ ರಾಜ್ಯ ಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನೆ ಹಿಂಸಾತ್ಮಾಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕರರು ರೈಲು, ವಾಹನಗಳಿಗೆ ಬೆಂಕಿ ಹಚ್ಚಿದ್ದು, ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿಗೆ ನಷ್ಟವನ್ನುಂಟು ಮಾಡಿದ್ದಾರೆ.
ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕಾರಣದಿಂದಾಗಿ 181 ಮೇಲ್ ಎಕ್ಸ್ ಪ್ರೆಸ್ ರೈಲುಗಳು ಮತ್ತು 348 ಪ್ರಯಾಣಿಕ ರೈಲುಗಳ ಸಂಚಾರ ವನ್ನು ಸ್ಥಗಿತಗೊಳಿಸಲಾಗಿದೆ. ನಾಲ್ಕು ಮೇಲ್ ಎಕ್ಸ್ ಪ್ರೆಸ್ ಮತ್ತು 6 ಪ್ರಯಾಣಿ ಕರ ರೈಲುಗಳು ಭಾಗಶ: ಸೇವೆ ಯನ್ನು ಸ್ಥಗಿತಗೊಳಿಸಿವೆ ಎಂದು ರೈಲ್ವೆ ಸಚಿವಾ ಲಯ ಮಾಹಿತಿ ನೀಡಿದೆ.
ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸಚಿವ ಸಂಪುಟ ಜೂ.14 ರಂದು ಒಪ್ಪಿಗೆ ನೀಡಿತ್ತು.