ಹೈದರಾಬಾದ್: ತಿರುಪತಿ ಲಡ್ಡುವಿನಲ್ಲಿ (Tirupati Laddu) ದನದ ಕೊಬ್ಬು (beef fat) ಸೇರಿಸಿದ ವಿವಾದ ಕುರಿತ ಎಸ್‌ಐಟಿ (SIT) ತನಿಖೆಗೆ ತಡೆ ನೀಡಲಾಗಿದೆ. ಸುಪ್ರೀಂ ಕೋರ್ಟ್ (Supreme court) ಈ ಬಗೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿತ್ತು. ಜೊತೆಗೆ, ಸುಪ್ರೀಂನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವುರಿಂದ ಅ.3ರವರೆಗೆ ತನಿಖೆಯನ್ನು ನಿಲ್ಲಿಸುತ್ತೇವೆ ಎಂದು ಆಂಧ್ರ ಪ್ರದೇಶ (Andhra Pradesh) ಡಿಜಿಪಿ ಹೇಳಿದ್ದಾರೆ.
ದೇವರ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಹಾಗಾಗಿ ನೀವೇ ರಚಿಸಿದ ಎಸ್‌ಐಟಿಯಿಂದ ತನಿಖೆ ನಡೆಸುವ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿತ್ತು. ಎಂದರೆ ಪರೋಕ್ಷವಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ತನಿಖೆಗೆ ಕೋರ್ಟ್ ಸೂಚಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಡಿಜಿಪಿ ದ್ವಾರಕಾ ತಿರುಮಲ ರಾವ್, ತಿರುಪತಿ ಲಡ್ಡು ಪ್ರಸಾದದಲ್ಲಿನ ಕಲಬೆರಕೆ ವಿವಾದದ ಬಗ್ಗೆ ತನಿಖೆಯನ್ನು ನಡೆಸಲು ಎಸ್‌ಐಟಿ ರಚಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಇದಕ್ಕೆ ಸಂಬಂಧಿಸಿದ ಪ್ರಕರಣ ನಡೆಯುತ್ತಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ತನಿಖೆಗೆ ಅ.3ರ ತನಕ ತಡೆ ನೀಡಲಾಗಿದೆ ಎಂದಿದ್ದಾರೆ.
ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿದ್ದು, ಅದು ತನಿಖೆ ಆರಂಭಿಸಿತ್ತು. ಈ ನಡುವೆ ಸೋಮವಾರ ಸುಪ್ರೀಂ ದೇವರ ವಿಚಾರದಲ್ಲಿ ರಾಜಕೀಯ ತರಬೇಡಿ ಎಂದು ಆಂಧ್ರ ಸರ್ಕಾರಕ್ಕೆ ಚಾಟಿ ಬೀಸಿ, ಎಸ್‌ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತ ಪಡಿಸಿತ್ತು.
ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ನೀಡುವ ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವುದು ಅಘಾತಕಾರಿ ವಿಷಯವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವ ದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆಗ್ರಹಿಸಿದೆ.
ಪ್ರಕರಣದ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸೂಚಿಸುವಂತೆ ಪ್ರಧಾನ ಮಂತ್ರಿಗಳಿಗೆ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರ ಮೂಲಕ ಸೋಮವಾರ ಮನವಿ ಪತ್ರ ಸಲ್ಲಿಸಿದರು.
ದೇವಸ್ಥಾನದಲ್ಲಿ ಕೊಡುವ ಲಾಡು ಕೇವಲ ಆಹಾರವಲ್ಲ, ಅದೊಂದು ಆಧ್ಯಾತ್ಮಿಕ ಭಾಗವಾಗಿದೆ. ಅದರಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವುದು ಭಕ್ತರಲ್ಲಿ ಕೋಪ ಮೂಡಿಸಿದೆ. ಈ ಕಾರಣದಿಂದ ತಪ್ಪಿಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Tirupati Laddu Row : ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ