Saturday, 14th December 2024

ನಾಲ್ಕು ಬೈಎಲೆಕ್ಷನ್‌: ಟಿಎಂಸಿ ಅಭ್ಯರ್ಥಿಗೆ ಮುನ್ನಡೆ

ಕೋಲ್ಕತಾ: ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬಂಗಾಳದ ಬಾಲಿಗಂಜ್ , ಛತ್ತೀಸ್‌ಗಢದ ಖೈರಗಢ, ಬಿಹಾರದ ಬೋಚಹಾನ್ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರ ಸಹಿತ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಆರಂಭವಾಗಿದೆ.

ಬಿಜೆಪಿಯಿಂದ ಪಕ್ಷಾಂತರವಾಗಿರುವ ತೃಣಮೂಲದ ನಾಯಕ ಬಾಬುಲ್ ಸುಪ್ರಿಯೋ 13 ಸುತ್ತಿನ ಮತ ಎಣಿೆಯ ಬಳಿಕ ಸುಮಾರು 10 ಸಾವಿರ ಮತಗಳಿಂದ ಮುಂದಿದ್ದಾರೆ.

ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದ ಖೈರಗಢ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಬಿಹಾರದ ಬೋಚಹಾನ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳದ ಅಭ್ಯರ್ಥಿ ಅಮರ್ ಕುಮಾರ್ ಪಾಸ್ವಾನ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಬೇಬಿ ಕುಮಾರಿಗಿಂತ 21,049 ಕ್ಕೆ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.