Friday, 4th October 2024

ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಕರೋನಾ ಸೋಂಕಿಗೆ ಬಲಿ

ನವದೆಹಲಿ: ಕರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕಾಜಲ್ ಸಿನ್ಹಾ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅತ್ಯಂತ ದುಃಖಕರ ಹಾಗೂ ಆಘಾತದ ವಿಚಾರವಾಗಿದೆ. ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಸಿನ್ಹಾ ಅವರು ತಮ್ಮ ಜೀವನವನ್ನು ಜನರ ಸೇವೆಗೆ ಅರ್ಪಿಸಿದರು. ದಣಿವರಿಯದ ಅಭಿಯಾನವನ್ನು ನಡೆಸಿದ್ದರು. ಪಕ್ಷದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಾಗಿದ್ದರು. ಅವಕ ಕುಟುಂಬ ಹಾಗೂ ಅಭಿಮಾನಗಳಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.