Wednesday, 11th December 2024

ಇಂದು ಸಿಎಂ ಬೊಮ್ಮಾಯಿ – ಪಿಎಂ ಮೋದಿ ಭೇಟಿ

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ಮಾಡುತ್ತೇನೆ.

ಇಂದಿನ ಭೇಟಿ ವೇಳೆ ಹಾನಗಲ್ ಉಪಚುನಾವಣೆ ಸೋಲು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.