Saturday, 14th December 2024

ಕೈಸುಡುತ್ತಿದೆ ಟೊಮೇಟೊ ಬೆಲೆ

ನವದೆಹಲಿ/ಬೆಂಗಳೂರು: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ.
ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕ ದಂತಾಗಿದೆ. ಒಂದು ಕೆಜಿ ಟೊಮೇಟೊ ಬೆಲೆ 80 ರಿಂದ 100 ರೂಪಾಯಿಗೆ ಮಾರಾಟವಾಗುತ್ತಿರುವುದು ಗ್ರಾಹಕರ ಕೈಸುಡುತ್ತಿದೆ. ಇದರಿಂದಾಗಿ ಜನರು ಟೊಮೇಟೊ ಬದಲಿಗೆ ಇತರೆ ಹುಳಿ ಪದಾರ್ಥಗಳತ್ತ ಚಿತ್ತ ಹರಿಸಿದ್ದಾರೆ. ಚಿಲ್ಲರೆ ಅಂಗಡಿ, ಹೋಲ್ ಸೇಲ್ ಅಂಗಡಿಗಳಲ್ಲಿ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಹೌಹಾರು ವಂತಾಗಿದೆ.

ಆಗ ಟೊಮೇಟೊ ಕೇವಲ 30 ರಿಂದ 40 ರೂ.ಗೆ ಮಾರಾಟವಾಗಿತ್ತು. ಆದರೆ, ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ದೇಶಾದ್ಯಂತ ಬೆಲೆಯಲ್ಲಿಎರಡು ಪಟ್ಟು ಹೆಚ್ಚಳವಾಗಿದೆ. ಉತ್ತರ ಭಾರತದ ಕಡೆಗಳಲ್ಲಿ ಭಾರೀ ಮಳೆಯಿಂದ ಟೊಮೋಟೊ ನೆಲ ಕಚ್ಚಿದ್ದರೆ, ಕರ್ನಾಟಕ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಳೆ ವಿಳಂಬ, ಅತಿಯಾದ ಉಷ್ಣಾಂಶ ಬೆಳೆ ಇಳುವರಿ ಕುಸಿತಕ್ಕೆ ಕಾರಣವಾಗಿದೆ. ಈ ಬೆಲೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.