ಐದು ಜಿಲ್ಲೆಗಳಲ್ಲಿ ಚಿತ್ರಮಂದಿರಗಳು, ಈಜುಕೊಳ ಮತ್ತು ಕ್ರೀಡಾ ಸಂಕೀರ್ಣಗಳನ್ನು ಮುಚ್ಚಲಾಗಿದೆ. ಮಾಲ್ ಹಾಗೂ ಮಾರುಕಟ್ಟೆಗಳಿಗೆ ಸಂಜೆ 5 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳು ತಮ್ಮ ಆಸನ ಸಾಮರ್ಥ್ಯದ ಶೇ.50 ರಷ್ಟು ಮಾತ್ರ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಕೇವಲ 50 ಪ್ರತಿಶತದಷ್ಟು ಸಿಬ್ಬಂದಿ ಹಾಜರಾತಿಯೊಂದಿಗೆ ಕಾರ್ಯ ನಿರ್ವಹಿಸಲು ಸೂಚನೆ ನೀಡಲಾಗಿದೆ.
ಸಾರ್ವಜನಿಕ ಸ್ಥಳಗಳಾದ ಮಾರುಕಟ್ಟೆ, ಸಾರ್ವಜನಿಕ ಸಾರಿಗೆ, ಉದ್ಯಾನವನಗಳು, ಧಾರ್ಮಿಕ ಸ್ಥಳಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು, ಹೋಟೆಲ್ ಗಳು, ಡಿಪಾರ್ಟ್‌ಮೆಂಟಲ್ ಸ್ಟೋರ್‌ಗಳು, ಪಡಿತರ ಅಂಗಡಿಗಳು, ಮದ್ಯ ಮತ್ತು ವೈನ್ ಅಂಗಡಿಗಳಂತಹ ಸಾರ್ವಜನಿಕ ಸ್ಥಳಗಳಿಗೆ ಸಂಪೂರ್ಣವಾಗಿ ಲಸಿಕೆ ಹಾಕಿದ ವ್ಯಕ್ತಿಗಳಿಗೆ ಮಾತ್ರ ಪ್ರವೇಶಿಸಲು ಅನುಮತಿಸಲಾಗಿದೆ.
ಇದಕ್ಕೂ ಮೊದಲು, ಹರಿಯಾಣ ಸರ್ಕಾರವು ರಾಜ್ಯಾದ್ಯಂತ ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಿತ್ತು. ಒಂದೇ ದಿನದಲ್ಲಿ 26 ಒಮಿಕ್ರಾನ್ ಪ್ರಕರಣ ಪತ್ತೆಯಾದ ನಂತರ ಹರಿಯಾಣ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.