ಚೆನ್ನೈ: ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಗಂಟೆಗೆ 75 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ(Train Accident) ಹೊಡೆದಿದ್ದು, ಗಾಯಾಳುಗಳ ಸಂಖ್ಯೆ 19ಕ್ಕೆ ಏರಿಕೆ ಆಗಿದೆ. ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ಪ್ರವೇಶಿಸಿದ ಪರಿಣಾಮ ಕನಿಷ್ಠ 12 ಬೋಗಿಗಳು ಹಳಿತಪ್ಪಿದವು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
Stranded passengers of Train No. 12578 Mysuru – Darbhanga Bagmati Express were provided with food and water
— Southern Railway (@GMSRailway) October 12, 2024
A Special Train Departed from Dr. MGR Chennai Central at 04:45 hrs on 12.10.2024 to reach their destination #SouthernRailway pic.twitter.com/h5lUKQOn3D
ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಕವರೈಪ್ಪೆಟ್ಟೈ ರೈಲು ನಿಲ್ದಾಣದಲ್ಲಿಈ ದುರ್ಘಟನೆ ಸಂಭವಿಸಿದ್ದು, ರೈಲು ಸಂಖ್ಯೆ 12578 ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. 1,360 ಪ್ರಯಾಣಿಕರು ರೈಲಿನಲ್ಲಿದ್ದರು. 19 ಪ್ರಯಾಣಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಡಾ.ಟಿ.ಪ್ರಭುಶಂಕರ್ ತಿಳಿಸಿದ್ದಾರೆ.
திருவள்ளூர் மாவட்டம் கவரைப்பேட்டையில் இரயில் விபத்து நடந்ததை அறிந்து அதிர்ச்சியடைந்தேன்.
— M.K.Stalin (@mkstalin) October 11, 2024
தகவல் கிடைக்கப்பெற்றவுடன், மாண்புமிகு அமைச்சர் @Avadi_Nasar அவர்களையும் மற்றும் மாவட்ட ஆட்சியர் உள்ளிட்ட அரசு அதிகாரிகளையும் விபத்து நடந்த இடத்திற்குச் செல்ல உத்தரவிட்டேன்.
மீட்பு மற்றும்…
ಇನ್ನು ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಎಂಟಿಸಿ ಬಸ್ಗಳ ಮೂಲಕ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಸಾಗಿಸಲಾಯಿತು. ಮುಂಜಾನೆ, ವಿಶೇಷ ರೈಲು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ನಿಂದ ಹೊರಟು, ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಇನ್ನು ಇಂದು 18 ರೈಲು ಸಂಚಾರ ರದ್ದು ಅಕ್ಟೋಬರ್ 12 ರಂದು ರದ್ದುಗೊಳಿಸಲಾಗಿದೆ. ಅಪಘಾತದ ಕುರಿತು ರೈಲ್ವೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ಸುದ್ದಿಯನ್ನೂ ಓದಿ: Train Accident : ಮೈಸೂರಿನಿಂದ ಬಿಹಾರಕ್ಕೆ ಹೊರಟಿದ್ದ ರೈಲು ಅಪಘಾತ; ಹಲವರಿಗೆ ಗಾಯ ಶಂಕೆ