Wednesday, 6th November 2024

Train Accident: ಗೂಡ್ಸ್‌ ರೈಲಿಗೆ ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ಡಿಕ್ಕಿ; ಗಾಯಾಳುಗಳ ಸಂಖ್ಯೆ 19ಕ್ಕೆ ಏರಿಕೆ

train accident

ಚೆನ್ನೈ: ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಗಂಟೆಗೆ 75 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ(Train Accident) ಹೊಡೆದಿದ್ದು, ಗಾಯಾಳುಗಳ ಸಂಖ್ಯೆ 19ಕ್ಕೆ ಏರಿಕೆ ಆಗಿದೆ. ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ಪ್ರವೇಶಿಸಿದ ಪರಿಣಾಮ ಕನಿಷ್ಠ 12 ಬೋಗಿಗಳು ಹಳಿತಪ್ಪಿದವು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಕವರೈಪ್ಪೆಟ್ಟೈ ರೈಲು ನಿಲ್ದಾಣದಲ್ಲಿಈ ದುರ್ಘಟನೆ ಸಂಭವಿಸಿದ್ದು, ರೈಲು ಸಂಖ್ಯೆ 12578 ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. 1,360 ಪ್ರಯಾಣಿಕರು ರೈಲಿನಲ್ಲಿದ್ದರು. 19 ಪ್ರಯಾಣಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಡಾ.ಟಿ.ಪ್ರಭುಶಂಕರ್ ತಿಳಿಸಿದ್ದಾರೆ.

ಇನ್ನು ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಎಂಟಿಸಿ ಬಸ್‌ಗಳ ಮೂಲಕ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಸಾಗಿಸಲಾಯಿತು. ಮುಂಜಾನೆ, ವಿಶೇಷ ರೈಲು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಟು, ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಇನ್ನು ಇಂದು 18 ರೈಲು ಸಂಚಾರ ರದ್ದು ಅಕ್ಟೋಬರ್ 12 ರಂದು ರದ್ದುಗೊಳಿಸಲಾಗಿದೆ. ಅಪಘಾತದ ಕುರಿತು ರೈಲ್ವೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈ ಸುದ್ದಿಯನ್ನೂ ಓದಿ: Train Accident : ಮೈಸೂರಿನಿಂದ ಬಿಹಾರಕ್ಕೆ ಹೊರಟಿದ್ದ ರೈಲು ಅಪಘಾತ; ಹಲವರಿಗೆ ಗಾಯ ಶಂಕೆ