ಫತೇಘರ್ ಸಾಹಿಬ್: ಸಿರ್ಹಿಂದ್‌ನ ಮಾಧೋಪುರ್ ಬಳಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆದಲ್ಲಿ ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಶ್ರೀ ಫತೇಘರ್ ಸಾಹಿಬ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಗೋಡ್ಸ್ ರೈಲಿನ ಬೋಗಿಗಳು ನಜ್ಜು ಗುಜ್ಜಾಗಿವೆ.
ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಸಿರ್ಹಿಂದ್ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿ ರತನ್ ಲಾಲ್ ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶ ಮೂಲದ ಇಬ್ಬರು ಲೋಕೋ ಪೈಲಟ್‌ಗಳನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶ್ರೀ ಫತೇಫರ್ ಸಾಹಿಬ್ ಸಿವಿಲ್ ಆಸ್ಪತ್ರೆ ಡಾ ಇವಾನ್ ಪ್ರೀತ್ ಕೌರ್ ವಿವರಿಸಿದ್ದಾರೆ.