ಹೈದರಾಬಾದ್: ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಉವೈಸಿಯವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿ ರುವುದರಿಂದ ಅವರು ಬೋಧಿಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವುದಿಲ್ಲ ಎಂದು ನೂತನ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಘೋಷಿಸುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ರಾಜ್ಯಪಾಲರಾದ ತಮಿಳಿಸಾಯಿ ಸೌಂದರರಾಜನ್ ಅವರು ಅಕ್ಬರುದ್ದೀನ್ ಉವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದರು.
ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಕೂಡಾ ತಮ್ಮ ಹಿಂದಿನ ಮುಖ್ಯಮಂತ್ರಿಯಂತೆ ಎಐಎಂಐಎಂ ಬಗ್ಗೆ ಭೀತಿ ಹೊಂದಿದ್ದು, ಈ ಹಿನ್ನೆಲೆ ಯಲ್ಲಿ ಅಕ್ಬರುದ್ದೀನ್ ಉವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ.
ಪೂರ್ಣಾವಧಿ ಸ್ಪೀಕರ್ ನೇಮಕ ಮಾಡಿದ ಬಳಿಕವಷ್ಟೇ ತಾವು ಪ್ರಮಾಣ ವಚನ ಸ್ವೀಕರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. 2018ರಲ್ಲಿ ಎಐಎಂಐಎಂ ಪಕ್ಷಕ್ಕೆ ಸೇರಿದ ಹಂಗಾಮಿ ಸ್ಪೀಕರ್ ಇದ್ದ ಹಿನ್ನೆಲೆಯಲ್ಲಿ ರಾಜಾ ಸಿಂಗ್ ಪ್ರಮಾಣವಚನ ಸ್ವೀಕರಿಸಿರಲಿಲ್ಲ.