Thursday, 12th December 2024

ತ್ರಾಲ್ ಪ್ರದೇಶದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರು ಹತ

ಶ್ರೀನಗರ: ಕಾಶ್ಮೀರದ ಪುಲ್ವಾಮಾ ಜಿಲ್ಲಾಯ ತ್ರಾಲ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರೆ.

ಇಬ್ಬರು ಭಯೋತ್ಪಾದಕರನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯ ಮುಜಾಫರ್ ಸೋಫಿ ಮತ್ತು ಉರ್ಮ ತೇಲಿ ಅಲಿಯಾಸ್ ತಲ್ಹಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಗರದ ಖೋನ್ಮೋಹ್ ಪ್ರದೇಶದಲ್ಲಿ ಈ ವರ್ಷದ ಆರಂಭದಲ್ಲಿ ಸರಪಂಚ್ ಹತ್ಯೆ ಸೇರಿದಂತೆ ಹಲ ವಾರು ಭಯೋತ್ಪಾದನೆ ಪ್ರಕರಣಗಳಲ್ಲಿ ಇವರಿಬ್ಬರು ಬೇಕಾಗಿದ್ದಾರೆ ಎಂದು ಹೇಳಿದರು.

ಭಯೋತ್ಪಾದಕರು ಅಡಗಿರುವ ತಾಣದ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಯಿತು. ಉಗ್ರರು ಭದ್ರತಾ ಪಡೆಗಳ ಮೇಲೆ ಮೊದಲು ಗುಂಡು ಹಾರಿಸಿದ್ದಾರೆ ನಂತರ ನಡೆದ ಎನ್ಕೌಂಟರ್‍ನಲ್ಲಿ ಉಗ್ರರ ಸದೆಬಡಿಯಲಾಗಿದೆ.